Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:12 - ಕನ್ನಡ ಸಮಕಾಲಿಕ ಅನುವಾದ

12 ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:12
22 ತಿಳಿವುಗಳ ಹೋಲಿಕೆ  

ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.


ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.


ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.


ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?


ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ?


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು