ಯೆಶಾಯ 45:13 - ಕನ್ನಡ ಸಮಕಾಲಿಕ ಅನುವಾದ13 ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |