Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:17
37 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು