Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:20 - ಕನ್ನಡ ಸಮಕಾಲಿಕ ಅನುವಾದ

20 “ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:20
32 ತಿಳಿವುಗಳ ಹೋಲಿಕೆ  

ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.


ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.


ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.


“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


“ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.


ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.


ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.


ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು?


ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”


ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.


“ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು