Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:22 - ಕನ್ನಡ ಸಮಕಾಲಿಕ ಅನುವಾದ

22 “ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:22
29 ತಿಳಿವುಗಳ ಹೋಲಿಕೆ  

ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.


ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.


“ವಿಗ್ರಹಗಳೇ, ಮುಂದೆ ಏನಾಗಲಿದೆ ಎಂದು ನಮಗೆ ಹೇಳಿ. ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು, ಅವುಗಳ ಪರಿಣಾಮವನ್ನು ಇಲ್ಲವೆ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು