Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆಯ್ದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಹೆಸರನ್ನು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಸೇವಕನಾದ ಯಾಕೋಬಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರುಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:4
18 ತಿಳಿವುಗಳ ಹೋಲಿಕೆ  

ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.


“ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು:


ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು