Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:7 - ಕನ್ನಡ ಸಮಕಾಲಿಕ ಅನುವಾದ

7 ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:7
39 ತಿಳಿವುಗಳ ಹೋಲಿಕೆ  

ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


“ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.


ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:


ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ.


“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು