Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:11 - ಕನ್ನಡ ಸಮಕಾಲಿಕ ಅನುವಾದ

11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:11
31 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.


“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.


“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.


ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು