ಯೆಶಾಯ 46:6 - ಕನ್ನಡ ಸಮಕಾಲಿಕ ಅನುವಾದ6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |