Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:9 - ಕನ್ನಡ ಸಮಕಾಲಿಕ ಅನುವಾದ

9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:9
28 ತಿಳಿವುಗಳ ಹೋಲಿಕೆ  

ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ?


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


“ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ, ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸುವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು