Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:1 - ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:1
36 ತಿಳಿವುಗಳ ಹೋಲಿಕೆ  

ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.


“ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.


“ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.


ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ. ಉನ್ನತದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾರೆ. ಅದನ್ನು ಕೆಡವಿ ನೆಲಸಮಮಾಡಿ ಧೂಳಿಗೆ ತಂದಿದ್ದಾರೆ.


“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”


ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.


ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


“ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು