Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:10 - ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:10
23 ತಿಳಿವುಗಳ ಹೋಲಿಕೆ  

ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು