ಯೆಶಾಯ 47:12 - ಕನ್ನಡ ಸಮಕಾಲಿಕ ಅನುವಾದ12 ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎದ್ದು ನಿಲ್ಲು, ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ಲೆಕ್ಕವಿಲ್ಲದ ನಿನ್ನ ಮಾಟಗಳನ್ನೂ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು, ಒಂದು ವೇಳೆ [ನಿನ್ನ ಶತ್ರುವಿನಲ್ಲಿ] ಭಯಹುಟ್ಟೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು. ಅಧ್ಯಾಯವನ್ನು ನೋಡಿ |