ಯೆಶಾಯ 47:13 - ಕನ್ನಡ ಸಮಕಾಲಿಕ ಅನುವಾದ13 ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು. ಅಧ್ಯಾಯವನ್ನು ನೋಡಿ |