ಯೆಶಾಯ 47:14 - ಕನ್ನಡ ಸಮಕಾಲಿಕ ಅನುವಾದ14 ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು. ಅಧ್ಯಾಯವನ್ನು ನೋಡಿ |