Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:6 - ಕನ್ನಡ ಸಮಕಾಲಿಕ ಅನುವಾದ

6 ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:6
28 ತಿಳಿವುಗಳ ಹೋಲಿಕೆ  

ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.


ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.


ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.


ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.


ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು