Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:1 - ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:1
48 ತಿಳಿವುಗಳ ಹೋಲಿಕೆ  

ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.


ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.


ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ


ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.


ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.


ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.


ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.


ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ನೀವು ನನ್ನ ಹತ್ತಿರ ಮಾತನಾಡಿದಾಗ, ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೆಯದು.


ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.


“ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.


“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.


ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು