ಯೆಶಾಯ 48:2 - ಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.