ಯೆಶಾಯ 48:5 - ಕನ್ನಡ ಸಮಕಾಲಿಕ ಅನುವಾದ5 ‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದರಿಂದಲೇ ಈ ಕಾರ್ಯಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ಬೊಂಬೆ, ಎರಕದ ಪುತ್ತಳಿ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು, ನಡೆಯುವದಕ್ಕೆ ಮುಂಚೆಯೇ ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’” ಅಧ್ಯಾಯವನ್ನು ನೋಡಿ |