ಯೆಶಾಯ 49:15 - ಕನ್ನಡ ಸಮಕಾಲಿಕ ಅನುವಾದ15 “ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ. ಅಧ್ಯಾಯವನ್ನು ನೋಡಿ |