ಯೆಶಾಯ 49:25 - ಕನ್ನಡ ಸಮಕಾಲಿಕ ಅನುವಾದ25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು. ಅಧ್ಯಾಯವನ್ನು ನೋಡಿ |