Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು : ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಪ್ರಿಯನನ್ನೂ ಅವನ ತೋಟವನ್ನೂ ಕುರಿತು ನನ್ನ ಪ್ರಿಯನ ಒಂದು ಗೀತವನ್ನು ನಾನು ಹಾಡುವೆ, ಕೇಳಿರಿ. ಸಾರವತ್ತಾದ ಗುಡ್ಡದ ಮೇಲೆ ನನ್ನ ಪ್ರಿಯನಿಗೆ ದ್ರಾಕ್ಷೆಯ ತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:1
23 ತಿಳಿವುಗಳ ಹೋಲಿಕೆ  

ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.


“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.


ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.


ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.


ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು.


ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.


ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.


“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು