Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:18 - ಕನ್ನಡ ಸಮಕಾಲಿಕ ಅನುವಾದ

18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ಅಕಾರ್ಯಗಳೆಂಬ ಹಗ್ಗಗಳಿಂದ ಅಪರಾಧ ದಂಡನೆಯನ್ನು, ತೇರನ್ನು ಹೊರಜಿಯಿಂದಲೋ ಎಂಬಂತೆ ಪಾಪದ ಫಲವನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾ ಆತನು ತ್ವರೆಪಡಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:18
23 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಆಗ ಮೀಕನು, “ನನಗೆ ಒಬ್ಬ ಲೇವಿಯನು ಯಾಜಕನಾಗಿರುವುದರಿಂದ, ಯೆಹೋವ ದೇವರು ನನಗೆ ಒಳ್ಳೆಯದನ್ನು ಮಾಡುವರೆಂದು ಈಗ ತಿಳಿಯುತ್ತೇನೆ,” ಎಂದುಕೊಂಡನು.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು