Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:19 - ಕನ್ನಡ ಸಮಕಾಲಿಕ ಅನುವಾದ

19 ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:19
13 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.


‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


“ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು