Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:2
31 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?


ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.


ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು