ಯೆಶಾಯ 5:20 - ಕನ್ನಡ ಸಮಕಾಲಿಕ ಅನುವಾದ20 ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು. ಅಧ್ಯಾಯವನ್ನು ನೋಡಿ |