Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:22 - ಕನ್ನಡ ಸಮಕಾಲಿಕ ಅನುವಾದ

22 ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ಮದ್ಯವನ್ನು ಬೆರೆಸುವುದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:22
14 ತಿಳಿವುಗಳ ಹೋಲಿಕೆ  

ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!


ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?


ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;


ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವುದು.


ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.


ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು