ಯೆಶಾಯ 5:26 - ಕನ್ನಡ ಸಮಕಾಲಿಕ ಅನುವಾದ26 ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ. ಅಧ್ಯಾಯವನ್ನು ನೋಡಿ |