ಯೆಶಾಯ 5:30 - ಕನ್ನಡ ಸಮಕಾಲಿಕ ಅನುವಾದ30 ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ. ಅಧ್ಯಾಯವನ್ನು ನೋಡಿ |