Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:5 - ಕನ್ನಡ ಸಮಕಾಲಿಕ ಅನುವಾದ

5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:5
31 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.


ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.


ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.


ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.


ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.


ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.


ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.


ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.


ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.


ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು