ಯೆಶಾಯ 5:7 - ಕನ್ನಡ ಸಮಕಾಲಿಕ ಅನುವಾದ7 ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ. ಅಧ್ಯಾಯವನ್ನು ನೋಡಿ |