Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:1
27 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.


“ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.


ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.


ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.


ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು