Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:4 - ಕನ್ನಡ ಸಮಕಾಲಿಕ ಅನುವಾದ

4 ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:4
31 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.


ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.


ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.


ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ. ಉದಯಕಾಲದಲ್ಲಿ ನನ್ನ ಪ್ರಾರ್ಥನೆಯು ನಿಮ್ಮನ್ನು ಎದುರುಗೊಳ್ಳುವುದು.


ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”


“ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.


ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.


ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.


ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.


ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು