Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:1 - ಕನ್ನಡ ಸಮಕಾಲಿಕ ಅನುವಾದ

1 ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:1
29 ತಿಳಿವುಗಳ ಹೋಲಿಕೆ  

ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು