Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:6 - ಕನ್ನಡ ಸಮಕಾಲಿಕ ಅನುವಾದ

6 ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:6
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.


“ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು