Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:8
12 ತಿಳಿವುಗಳ ಹೋಲಿಕೆ  

ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.


ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.


ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


“ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು