Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:9
40 ತಿಳಿವುಗಳ ಹೋಲಿಕೆ  

ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.


ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.


ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.


ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.


ಪೂರ್ವದ ದಿವಸಗಳನ್ನೂ ಆದಿಕಾಲದ ವರ್ಷಗಳನ್ನೂ ಯೋಚಿಸಿದೆ.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?


ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.


ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.


ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು