Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:11 - ಕನ್ನಡ ಸಮಕಾಲಿಕ ಅನುವಾದ

11 ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:11
37 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.


“ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.


ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’ ”


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.


ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.


“ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


“ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.


“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು