Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:12 - ಕನ್ನಡ ಸಮಕಾಲಿಕ ಅನುವಾದ

12 ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:12
23 ತಿಳಿವುಗಳ ಹೋಲಿಕೆ  

ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.


ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.


ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.


ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.


ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.


ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.


ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು