ಯೆಶಾಯ 52:2 - ಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆರೂಸಲೇಮೇ, ದೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕೂಡ್ರು! ಸೆರೆಬಿದ್ದ ಚೀಯೋನ್ ಕನ್ಯೆಯೇ, ನಿನ್ನ ಕತ್ತಿನ ಪಾಶವನ್ನು ಬಿಚ್ಚಿಬಿಡು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ. ಅಧ್ಯಾಯವನ್ನು ನೋಡಿ |