Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:3
13 ತಿಳಿವುಗಳ ಹೋಲಿಕೆ  

ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.


ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ,


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


“ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.


ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು