Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:5 - ಕನ್ನಡ ಸಮಕಾಲಿಕ ಅನುವಾದ

5 “ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:5
27 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”


“ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”


ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


“ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.


ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.


ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?


ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ.


ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.


ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು