Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:7 - ಕನ್ನಡ ಸಮಕಾಲಿಕ ಅನುವಾದ

7 ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:7
30 ತಿಳಿವುಗಳ ಹೋಲಿಕೆ  

ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು:


ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.


ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ನನ್ನ ಪ್ರಿಯನ ಸ್ವರವು! ಇಗೋ! ಅವನು ಪರ್ವತಗಳ ಮೇಲೆ ಹಾರುತ್ತಾ, ಗುಡ್ಡಗಳ ಮೇಲೆ ಜಿಗಿಯುತ್ತಾ ಬರುತ್ತಿದ್ದಾನೆ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.


ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.


ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು