Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:11 - ಕನ್ನಡ ಸಮಕಾಲಿಕ ಅನುವಾದ

11 ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:11
37 ತಿಳಿವುಗಳ ಹೋಲಿಕೆ  

ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು