Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:12
38 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


“ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು