ಯೆಶಾಯ 53:3 - ಕನ್ನಡ ಸಮಕಾಲಿಕ ಅನುವಾದ3 ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ. ಅಧ್ಯಾಯವನ್ನು ನೋಡಿ |