ಯೆಶಾಯ 53:5 - ಕನ್ನಡ ಸಮಕಾಲಿಕ ಅನುವಾದ5 ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.