ಯೆಶಾಯ 53:6 - ಕನ್ನಡ ಸಮಕಾಲಿಕ ಅನುವಾದ6 ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.