Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:1 - ಕನ್ನಡ ಸಮಕಾಲಿಕ ಅನುವಾದ

1 “ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:1
21 ತಿಳಿವುಗಳ ಹೋಲಿಕೆ  

ಏಕೆಂದರೆ, “ಬಂಜೆಯೇ, ಹೆರದವಳೇ, ಆನಂದಿಸು. ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆ.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.


ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ನಿಮ್ಮ ದುಃಖದ ಸಮಯದಲ್ಲಿ ಜನಿಸಿದ ಮಕ್ಕಳು ‘ಸ್ಥಳವು ನನಗೆ ಇಕ್ಕಟ್ಟಾಯಿತು. ನಾನು ವಾಸಿಸುವುದಕ್ಕೆ ಸ್ಥಳಕೊಡು,’ ಎಂದು ಇನ್ನೂ ನಿಮ್ಮ ವಿಚಾರಣೆಯಲ್ಲಿ ಹೇಳುತ್ತಾರೆ.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?


ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.


“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.


“ಅವಳಿಗೆ ನೋವು ಆಗುವುದಕ್ಕಿಂತ ಮುಂಚೆಯೇ ಹೆತ್ತಳು. ವೇದನೆ ಬರುವುದಕ್ಕಿಂತ ಮುಂಚೆಯೇ ಗಂಡು ಕೂಸು ಪಡೆದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು