Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:17 - ಕನ್ನಡ ಸಮಕಾಲಿಕ ಅನುವಾದ

17 ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:17
44 ತಿಳಿವುಗಳ ಹೋಲಿಕೆ  

ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.


ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.


ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.


“ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು